HomeKarnatakaಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಹಿನ್ನೆಲೆ ರಾಜಸ್ವ ನಿರೀಕ್ಷಕರ ಲಾಗಿನ್ ಗೆ ಜಾತಿ, ಆದಾಯ ಪ್ರಮಾಣ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಹಿನ್ನೆಲೆ ರಾಜಸ್ವ ನಿರೀಕ್ಷಕರ ಲಾಗಿನ್ ಗೆ ಜಾತಿ, ಆದಾಯ ಪ್ರಮಾಣ ಪತ್ರ ವರ್ಗಾವಣೆ

ಕಂದಾಯ ಆಯುಕ್ತರು, ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಬೆಂಗಳೂರು ರವರು ಕರ್ನಾಟಕ ರಾಜ್ಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಅರ್ಜಿ ಸಲ್ಲಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತು ಆದಾಯ ಪ್ರಮಾಣ ಪತ್ರಗಳ ಅರ್ಜಿಗಳನ್ನು ಹಾಗೂ ಮುಂದೆ ಸ್ವೀಕೃತವಾಗುವ ಹೊಸ ಅರ್ಜಿಗಳನ್ನು ಒಳಗೊಂಡಂತೆ ಎಜೆಎಸ್‍ಕೆ ದತ್ತಾಂಶ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ನಿಂದ ರಾಜಸ್ವ ನಿರೀಕ್ಷಕರವರ ಲಾಗಿನ್ ಗೆ ವರ್ಗಾಯಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ರಾಜಸ್ವ ನಿರೀಕ್ಷಕರವರ ಲಾಗಿನ್ನಲ್ಲಿ ಸ್ವೀಕೃತವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ “FIELD VERIFICATION IS PENDING”  ಎಂದು ಷರಾ ನಮೂದಾಗಿದ್ದಲ್ಲಿ ರಾಜಸ್ವ ನಿರೀಕ್ಷಕರು ಕ್ಷೇತ್ರ ಪರಿಶೀಲನೆ ಮಾಡಬೇಕಾಗಿರುತ್ತದೆ. ಎಜೆಎಸ್‍ಕೆ ದತ್ತಾಂಶದಲ್ಲಿನ ಸದರಿ ಬದಲಾವಣೆಗಳನ್ನು ಸದ್ಭಳಕೆ ಮಾಡಿಕೊಂಡು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಕಾಲದಲ್ಲಿ ವಿತರಿಸಿ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಲು ತಿಳಿಸಿದ್ದಾರೆ.

ಅದರಂತೆ ಈಗಾಗಲೇ ಜಿಲ್ಲೆಯ ಎಲ್ಲ ತಹಶೀಲ್ದಾರರಿಗೆ ಹಾಗೂ ಕಂದಾಯ ಪರಿವೀಕ್ಷಕರಿಗೆ ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ವಿತರಿಸುವಲ್ಲಿ ಯಾವುದೇ ತೊಂದರೆಯಾಗದಂತೆ ಸರ್ಕಾರದ ಆದೇಶದಂತೆ ಈಗಾಗಲೇ ಕ್ರಮವಹಿಸಲಾಗಿದೆ. ಆದರೂ ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 08272-221077 ನ್ನು ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular