BIG NEWS: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾಗಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡುವ ಮೂಲಕ ಸಂಚಲನ ಮೂಡಿಸಿದೆ. ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ ಬಿಹಾರ ಸರ್ಕಾರ ಬಿಡುಗಡೆ ಮಾಡಿದ ಜಾತಿಗಣತಿ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ.

ಇದೀಗ ರಾಜ್ಯದಲ್ಲಿಯೂ ಈ ಹಿಂದೆ ನಡೆದಿದ್ದ ಜಾತಿ ಸಮೀಕ್ಷೆ ವರದಿ ಸ್ವೀಕೃತಿ ಸಂಬಂಧ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಅಧಿಕಾರದಲ್ಲಿದ್ದಾಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015 ನಡೆಸಲಾಗಿತ್ತು. ಹೆಚ್ ಕಾಂತರಾಜು ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ಸಮೀಕ್ಷೆ ನಡೆಸಿದ್ದು, ಇದಕ್ಕಾಗಿ 158.47 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದ ಸಮೀಕ್ಷಾ ವರದಿ ಸಿದ್ಧಪಡಿಸಲಾಗಿದೆ. 2018ರಲ್ಲಿ ವರದಿ ಮುದ್ರಣವಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ಕಾರಣ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿರಲಿಲ್ಲ.

ನಂತರದಲ್ಲಿ ಅಧಿಕಾರಕ್ಕೆ ಬಂದ ಮೈತ್ರಿ ಸರ್ಕಾರ ವರದಿ ಸ್ವೀಕರಿಸಲು ಮುಂದಾಗಲಿಲ್ಲ. ಈಗ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿ ಸ್ವೀಕರಿಸುವುದಾಗಿ ಹೇಳಿದ್ದು, ಬಿಹಾರದಲ್ಲಿ ಜಾತಿಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆ ಚರ್ಚೆ ಮುನ್ನೆಲೆಗೆ ಬಂದಿದೆ. ಕೆಲವು ಸಮುದಾಯಗಳು ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ವರದಿ ಬಹಿರಂಗಪಡಿಸದಂತೆ ಒತ್ತಡ ಹೇರುತ್ತಿವೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read