ಪಾನಮತ್ತನಾಗಿದ್ದ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಮುನ್ನೆಲೆಗೆ ಬಂದಿದೆ. ಈ ಘಟನೆ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆದಿದ್ದು ಆರೋಪಿತ ಟಿಟಿಇಯನ್ನು ಅಮಾನತು ಮಾಡಲಾಗಿದೆ.
ಕುಡಿದ ಅಮಲಿನಲ್ಲಿದ್ದ ಟಿಟಿಇ ಟಿಕೆಟ್ ನೀಡುವಂತೆ ಕೇಳುತ್ತಿದ್ದಾಗ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಪ್ರಯಾಣಿಕರು ಆರೋಪಿಸಿದ್ದಾರೆ.
ಅಂತರ್ಜಾಲದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಟಿಟಿಇ ಟಿಕೆಟ್ ತೋರಿಸುವಂತೆ ಮಹಿಳಾ ಪ್ರಯಾಣಿಕರನ್ನ ಕೇಳುತ್ತಿರುವುದನ್ನು ಕಾಣಬಹುದು. ಇಬ್ಬರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಂತೆ ಹುಡುಗಿ ತನ್ನ ಫೋನ್‌ನಲ್ಲಿ ಟಿಕೆಟ್‌ಗಾಗಿ ತೀವ್ರವಾಗಿ ಹುಡುಕುತ್ತಿದ್ದಳು. ಮತ್ತೊಬ್ಬ ಪ್ರಯಾಣಿಕ ಯುವತಿಯ ಬೆಂಬಲಕ್ಕೆ ನಿಂತಿದ್ದಾಗ ನೋಡುಗರು ವಿಡಿಯೋ ಚಿತ್ರೀಕರಣ ಮಾಡುತ್ತಿರುವುದು ಕಂಡುಬಂದಿದೆ.
ಟಿಟಿಇ ಮಹಿಳಾ ಪ್ರಯಾಣಿಕರನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಲ್ಲದೇ ಟಿಕೆಟ್ ಇಲ್ಲದೆ ರೈಲಿಗೆ ಹತ್ತಿದರು ಎಂದು ಆರೋಪಿಸಿ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಟಿಟಿಇಯನ್ನು ರೈಲ್ವೇ ಇಲಾಖೆ ಅಮಾನತುಗೊಳಿಸಿದ್ದು, ಬಗ್ಗೆ ತನಿಖೆ ನಡೆಯುತ್ತಿದೆ.
ಅಮೃತಸರ-ಕೋಲ್ಕತ್ತಾ ಅಕಲ್ ತಖ್ತ್ ಎಕ್ಸ್ ಪ್ರೆಸ್‌ನಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಮಹಿಳೆಯ ತಲೆಯ ಮೇಲೆ ಮೂತ್ರ ವಿಸರ್ಜಿಸಿದ್ದ ಘಟನೆಯ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.
https://twitter.com/MirrorNow/status/1635911565814771712?ref_src=twsrc%5Etfw%7Ctwcamp%5Etweetembed%7Ctwterm%5E1635911565814771712%7Ctwgr%5Ee11447deab5a9650be6e16eb570765bb653a734c%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Ftimesnownews-epaper-dhf729babb066e4159bc8e6ad4fc8cd3b9%2Fcaughtoncamdrunkttemisbehaveswithfemalepassengeratbengalururailwaystationsuspended-newsid-n480509446