ತಾಯಿ-ಮಗು ಮೇಲೆ ಬೀಡಾಡಿ ಹಸುವಿನಿಂದ ಭೀಕರ ದಾಳಿ ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch Video

ಚೆನ್ನೈ, ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀಡಾಡಿ ಹಸುವೊಂದು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ನಡೆಸಿದ ಭೀಕರ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚೆನ್ನೈ ಮಹಾನಗರ ಪಾಲಿಕೆಯ (GCC) ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀಡಿಯೊದಲ್ಲಿ, ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ. ತಾಯಿ, ಮಗುವನ್ನು ರಕ್ಷಿಸಲು ಮುಂದಾದಾಗ, ಆಕೆಯ ಮೇಲೆಯೇ ದಾಳಿ ನಡೆಸುತ್ತದೆ. ಈ ಘಟನೆಯನ್ನು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಸ್ಥಳೀಯರು ತಕ್ಷಣವೇ ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿ, ಹಸುವನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡೈಲಿ ತಂತಿ ವರದಿಯ ಪ್ರಕಾರ, ಗಾಯಗೊಂಡ ಮಹಿಳೆಯನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಘಟನೆ ನಡೆದ ನಂತರ, ಗ್ರೇಟರ್ ಚೆನ್ನೈ ಕಾರ್ಪೊರೇಶನ್ (GCC) ಅಧಿಕಾರಿಗಳು ಹಸುವನ್ನು ಹಿಡಿದು ವಾಹನದಲ್ಲಿ ಕರೆದೊಯ್ದಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಬೀಡಾಡಿ ಪ್ರಾಣಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ದನಗಳು ಮತ್ತು ಬೀಡಾಡಿ ನಾಯಿಗಳ ಬಗ್ಗೆ ಪದೇ ಪದೇ ದೂರು ನೀಡಿದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪ್ರತಿದಿನ ಇದೇ ಸಮಸ್ಯೆ ಎದುರಿಸುತ್ತಿದ್ದೇವೆ, ಆದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನನ್ನ ಪ್ರದೇಶದಲ್ಲಿ ಮಾತ್ರ 150ಕ್ಕೂ ಹೆಚ್ಚು ಬೀಡಾಡಿ ದನಗಳು ಮತ್ತು ಲೆಕ್ಕವಿಲ್ಲದಷ್ಟು ನಾಯಿಗಳು ಮುಂಜಾನೆ ಮತ್ತು ಸಂಜೆಗಳಲ್ಲಿ ಸ್ವಚ್ಛಂದವಾಗಿ ತಿರುಗಾಡುತ್ತಿವೆ” ಎಂದು ಬಳಕೆದಾರರೊಬ್ಬರು GCCಯನ್ನು ಟ್ಯಾಗ್ ಮಾಡಿ ದೂರಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read