ಅರ್ರಾಹ್: ಆಸ್ಪತ್ರೆಯ ಆವರಣದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ಬಿಹಾರದ ಅರ್ರಾಹ್ ನಗರದಲ್ಲಿ ನಡೆದಿದೆ.
ಸಂತ್ರಸ್ತ ತನ್ನ ಗರ್ಭಿಣಿ ಪತ್ನಿಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹಳದಿ ಟೀ ಶರ್ಟ್ ಮತ್ತು ಜೀನ್ಸ್ ಧರಿಸಿದ ಆಕ್ರಮಣಕಾರ ತನ್ನ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ಆಸ್ಪತ್ರೆಯೊಳಗೆ ಹೊಕ್ಕಿದ್ದಾನೆ.
ಈ ವೇಳೆ ಆಸ್ಪತ್ರೆ ಆವರಣದೊಳಗೆ ಕಾಯುವ ಕೋಣೆಯಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ಗುಂಡು ಹಾರಿಸಿದ್ದಾನೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಕುಪಿತಗೊಂಡು ಆತನಿಗೆ ಹಲ್ಲೆ ಮಾಡಲು ಮುಂದಾದಾಗ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ದುಷ್ಕರ್ಮಿಯು ವ್ಯಕ್ತಿಯ ಮೇಲೆ ಎರಡು ಗುಂಡುಗಳನ್ನು ಹಾರಿಸಿದ್ದಾನೆ. ಪರಿಣಾಮ ಆತ ಗಂಭೀರ ಗಾಯಗೊಂಡಿದ್ದು, ಕೂಡಲೇ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಜಿಲ್ಲೆಯ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ದಾರಾಹ್ರಾ ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯು ಆಸ್ಪತ್ರೆಯಲ್ಲಿ ಭಾರಿ ಗೊಂದಲಕ್ಕೆ ಕಾರಣವಾಗಿದ್ದು, ದಾಳಿಕೋರ ಯಾವುದೇ ಪ್ರತಿರೋಧವಿಲ್ಲದೆ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
https://twitter.com/ANI/status/1697445772659503501?ref_src=twsrc%5Etfw%7Ctwcamp%5Etweetembed%7Ctwterm%5E1697445772659503501%7Ctwgr%5Ecc28e07912d45fc6f24a68db37de43086931a25d%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Findiac2390847183200-epaper-dhf6af4a9befa548589eba0f15b9db5a4f%2Fcaughtoncctvbiharmanshotatinsidehospitalcritical-newsid-n533591824