ಕಾವೇರಿ ಪ್ರಾಧಿಕಾರದ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನ: ಮತ್ತೆ ನೀರು ಬಿಟ್ಟರೆ ಕರ್ನಾಟಕ ಸ್ವಾಭಿಮಾನಕ್ಕೆ ಧಕ್ಕೆ: ಬಿ.ಎಸ್.ವೈ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ತಮಿಳುನಾಡಿಗೆ ಮತ್ತೆ ನೀರು ಬಿಟ್ಟರೆ, ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆಯಾದಂತೆಯೇ ಸರಿ. ಕಾವೇರಿ ನೀರಿನ ಕುರಿತಂತೆ ರಾಜ್ಯ ಸರ್ಕಾರದ ನಿರ್ಲಕ್ಷ್ಯತನದಿಂದ ಇಂದು ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಬರದ ಮಧ್ಯೆ ತಮಿಳುನಾಡಿಗೆ ಈಗಾಗಲೇ ಹೆಚ್ಚಿನ ನೀರು ಬಿಟ್ಟು, ರಾಜ್ಯ ಸರ್ಕಾರ ನಾಡಿನ ಜನತೆಯ, ಅದರಲ್ಲೂ ವಿಶೇಷವಾಗಿ ರೈತರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯ ಸರ್ಕಾರ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

https://twitter.com/BSYBJP/status/1706645239078039807

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read