ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿಯೂ ಕಾರ್ನಾಟಕಕ್ಕೆ ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನೇ CWMA ಎತ್ತಿ ಹಿಡಿದಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಬೆಳಿಗ್ಗೆ ನಡೆಸಿದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ಕಾವೇರಿ ನೀರು ಹರಿಸುವಂತೆ ಸೂಚನೆ ನಿಡಿತ್ತು. ಇದೀಗ ಇದೇ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಧಿಕಾರ ಕೂಡ ಎತ್ತಿ ಹಿಡಿದಿದೆ. ಇದರಿಂದ ಕರ್ನಾಟಕ್ಕೆ ಭಾರಿ ಸಂಕಷ್ಟ ಎದುರಾಗಿದೆ,.
ಸತತ ಮೂರು ಬಾರಿ ಕೂಡ CWRC ಹಾಗೂ CWMA ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದ್ದು, ರಾಜ್ಯದ ಅಧಿಕಾರಿಗಳು ಕಾವೇರಿ ಕೊಳ್ಳದ ರೈತರ ಪರವಾಗಿ ಸಮರ್ಪಕವಾಗೊ ವಾದ ಮಂಡಿಸುತ್ತಿಲ್ಲ. ಅಧಿಕಾರಿಗಳು ವಾದ ಮಂಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
CWRC ಹಾಗೂ CWMA ಆದೇಶ ಹೊರ ಬಿದ್ದ ಬೆನ್ನಲ್ಲೇ ಮಂಡ್ಯದಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಕಾವೇರಿ ಕೊಳ್ಳದಲ್ಲಿ ನೀರಿಲ್ಲ. ಕೆ.ಆರ್.ಎಸ್.ಡ್ಯಾಂನಲ್ಲಿ ನೀರಿನ ಸಂಗ್ರಹ ಸಂಪೂರ್ಣ ಕಡಿಮೆಯಾಗಿದೆ. ಈಗಿರುವ ನೀರು ಕುಡಿಯುವ ನೀರಿಗೂ ಸಾಲುವುದಿಲ್ಲ ಅಂತಹ ಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸೂಕ್ತವಾಗಿ ವಾದ ಮಂಡಿಸಿ ಇಲ್ಲಿನ ರೈತರ ಸಂಕಷ್ಟ, ಬರಗಾಲ ಸ್ಥಿತಿ, ನೀರಿನ ಅಭಾವದ ಬಗ್ಗೆ ಮನವರಿಕೆ ಮಾಡಿಕೊಡುವುದನ್ನು ಬಿಟ್ಟು, ಪ್ರಾಧಿಕಾರಿಗಳು ಹೇಳುವ ಆದೇಶಗಳಿಗೆ ಮೌನವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬರಿ ಬಾಯಲ್ಲಿ ಮಾಅತ್ರ ಹೇಳಿಕೆ ಕೊಡುತ್ತಾ, ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಾ ರೈತರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.
ರೈತರ ಹಿತ ಕಾಯುವ ಮನಸ್ಸಿದ್ದರೆ ಕಾವೇರಿ ನೀರಿನ ವಿಚಾರದಲ್ಲಿ ಮೂರು ಬಾರಿ ಹಿನ್ನಡೆಯಾಗುವ ಸ್ಥಿತಿಗೆ ಬರುತ್ತಿರಲಿಲ್ಲ. ಸಮರ್ಪಕವಾಗಿ ವಾದ ಮಂಡಿಸಿ ಕರ್ನಾಟಕದ ಪರ ಆದೇಶ ಬರುವಂತೆ ಮಾಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ರೈತರಿಗೆ ಅನ್ಯಾಯ ಮಾಡುತ್ತಿದೆ. ಈ ರೀತಿ ಪದೇ ಪದೇ ಅನ್ಯಾಯ ಮಾಡುವ ಬದಲು ವಿಷಕೊಟ್ಟು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ CWRC ಹಾಗೂ CWMA ವಿರುದ್ಧ ಘೋಷಣೆಗಳನ್ನ್ನು ಕೂಗಿದರು.
ಕಾವೇರಿ ವಿವಾದ: CWRC ಯಿಂದ ಕರ್ನಾಟಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ಮತ್ತೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ಆಘಾತ ನೀಡಿದೆ. ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ಕಾವೇರಿ ನೀರು ಬಿಡುವಂತೆ ಆದೇಶ ನೀಡಿದೆ.
ನವದೆಹಲಿಯಲ್ಲಿ CWRC ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಇನ್ನೂ 15 ದಿನಗಳ ಕಾಲ ಪ್ರತಿದಿನ 6000 ಕ್ಯೂಸೆಕ್ ನೀರಿನಂತೆ ತಮಿಳುನಾದಿಗೆ ಕಾವೇರಿ ನೀರು ಹರಿಸಬೇಕು ಎಂದು ಸೂಚಿಸಿದೆ.
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಕಾವೇರಿ ಕೊಳ್ಳದಲ್ಲಿ ನೀರಿನ ಅಭಾವವಿದ್ದು, ಇಲ್ಲಿನ ರೈತರೇ ಬೆಳೆಗಳಿಗೆ ನೀರಿಲ್ಲದೇ ಸಂಕಷ್ಟದಲ್ಲಿದ್ದಾರೆ. ಕೆ.ಆರ್.ಎಸ್ ನಲ್ಲಿ ನೀರಿನ ಸಂಗ್ರಹವಿಲ್ಲ. ಈಗಾಗಲೇ ಕರ್ನಾಟಕ ಪ್ರತಿದಿನ 9000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ. ಮತ್ತೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯದ ಅಧಿಕಾರಿಗಳು ವಾದ ಮಂಡಿಸಿದರು. ಕರ್ನಾಟಕದಲ್ಲಿ ನೀರಿನ ಅಭಾವವಿರುವುದರಿಂದ ಪ್ರತಿದಿನ ಹರಿಸುವ ನೀರಿನ ಪ್ರಮಾಣವನ್ನು 6000 ಕ್ಯೂಸೆಕ್ ಗೆ ತಗ್ಗಿಸಿ ಆದೇಶ ಹೊರಡಿಸಲಾಗಿದೆ ಎಂದು CWRC ತಿಳಿಸಿದೆ.
CWRC ಆದೇಶದ ಬೆನ್ನಲ್ಲೇ CWMA ನಡೆಸಿದ ಸಭೆಯ;ಲ್ಲಿಯೂ ಕರ್ನಾಟಕ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ. ಇದು ಕಾವೇರಿ ಕೊಳ್ಳದಲ್ಲಿ ರೈತರು, ರೈತ ಸಂಘಟನೆಗಳು ಮತ್ತೆ ಪ್ರತಿಭಟನೆ ಮೂಲಕ ಭುಗಿಲೇಳಲು ಕಾರಣವಾಗಿದೆ.

