HomeKarnatakaBIG NEWS : ಕಾವೇರಿ ವಿವಾದ ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ : ನಟ...

BIG NEWS : ಕಾವೇರಿ ವಿವಾದ ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ : ನಟ ಅಭಿಷೇಕ್ ಅಂಬರೀಶ್

ಮಂಡ್ಯ : ಕಾವೇರಿ ವಿವಾದ ಹಳೇ ಸಮಸ್ಯೆ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದರು.

ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ ನಟ ಅಭಿಷೇಕ್ ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿದರು.

ಸುಪ್ರೀಂ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಹರಿಸಿದರೆ ಇಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತದೆ . ಕಾವೇರಿ ನೀರು ಹಳೇ ಸಮಸ್ಯೆ, ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಕಾವೇರಿ ಹೋರಾಟಕ್ಕೆ ಒಂದು ವೇದಿಕೆ ಸೃಷ್ಟಿ ಮಾಡುತ್ತೇವೆ, ಚಿತ್ರನಟರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಭಟನಕಾರರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular