HomeKarnatakaಕಾವೇರಿ ವಿವಾದ: ಹೊಸ ಕಮಿಟಿ ಬಂದ ಬಳಿಕ ಚರ್ಚಿಸಿ ಧ್ವನಿ ಎತ್ತುತ್ತೇವೆ ಎಂದ ಫಿಲ್ಮ್ ಚೇಂಬರ್...

ಕಾವೇರಿ ವಿವಾದ: ಹೊಸ ಕಮಿಟಿ ಬಂದ ಬಳಿಕ ಚರ್ಚಿಸಿ ಧ್ವನಿ ಎತ್ತುತ್ತೇವೆ ಎಂದ ಫಿಲ್ಮ್ ಚೇಂಬರ್ ಅಧ್ಯಕ್ಷ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಕನ್ನಡ ಚಿತ್ರರಂಗದ ನಟರು ಧ್ವನಿ ಎತ್ತದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಕನ್ನಡ ಪರ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಫಿಲ್ಮ್ ಚೇಂಬರ್ ಮುಂದೆ ಪ್ರತಿಭಟನೆ ನಡೆಸಿದ್ದರು. ಸ್ಯಾಂಡಲ್ ವುಡ್ ನಟರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮ.ಹರೀಶ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿರುವುದು ನಮಗೂ ಗೊತ್ತಿರಲಿಲ್ಲ. ನೆಲ, ಜಲ, ಭಾಷೆ ವಿಚಾರ ಬಂದಾಗ ಕನ್ನಡ ಇಂಡಸ್ಟ್ರಿ ಯಾವತ್ತೂ ಬೆಂಬಲವಾಗಿ ನಿಲ್ಲುತ್ತೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಧ್ಯ ಫಿಲ್ಮ್ ಚೇಂಬರ್ ಎಲೆಕ್ಷನ್ ಇರುವ ಕಾರಣಕ್ಕೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಹೊಸ ಕಮಿಟಿ ಬಂದ ಬಳಿಕ ಚರ್ಚೆ ಮಾಡಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular