HomeLatest Newsಕಾವೇರಿ ನದಿ ನೀರು ವಿವಾದ: ಆ.3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್ ಗೆ ಕರ್ನಾಟಕ...

ಕಾವೇರಿ ನದಿ ನೀರು ವಿವಾದ: ಆ.3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್ ಗೆ ಕರ್ನಾಟಕ ಸರ್ಕಾರ ಆಹ್ವಾನ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆಯುತ್ತಿರುವ ತಮಿಳುನಾಡಿನೊಂದಿಗೆ ಕರ್ನಾಟಕ ಸರ್ಕಾರ ಸಂಧಾನಕ್ಕೆ ಮುಂದಾಗಿದೆ. ಈ ವಿಚಾರವಾಗಿ ಆಗಸ್ಟ್ 3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿ​ಗೆ ಕರ್ನಾಟಕ ಸರ್ಕಾರ ಆಹ್ವಾನ ನೀಡಿದೆ.

ಕರ್ನಾಟಕದಲ್ಲಿ ಭೀಕರ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶ ನೀಡಿತ್ತು. ಜುಲೈ 26ರ ಬಳಿಕ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ . ಈ ಹಿನ್ನೆಲೆ ಒಂದು ವಾರದ ಬಳಿಕ ಅಂದರೆ ,ಜು.28ಕ್ಕೆ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ನೀರು ಬಿಡಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧಾರ ಮಾಡುವುದಾಗಿ ತಿಳಿಸಿತ್ತು. ಈ ಬೆಳವಣಿಗೆ ನಡುವೆ ಕರ್ನಾಟಕ ಸರ್ಕಾರ ತಮಿಳುನಾಡಿಗೆ ಮಾತುಕತೆಗೆ ಆಹ್ವಾನ ನೀಡಿದೆ.

ಕರ್ನಾಟಕ ಮತ್ತು ತಮಿಳುನಾಡು ನಡುವೆ ಪತ್ರ ವ್ಯವಹಾರ ನಡೆದಿದ್ದರೂ ಮಾತುಕತೆಗೆ ಬರುವ ವಿಚಾರವಾಗಿ ಸಿಎಂ ವಿಜಯ್​​ರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ತಮಿಳುನಾಡಿನ ಮುಂದಿನ ನಿರ್ಧಾರದ ಬಗ್ಗೆ ಕುತೂಹಲ ಮೂಡಿಸಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ಸಿಎಂ ವಿಜಯ್​​ ಬಂದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ಮಹತ್ವದ ಸಭೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಲೋಕಸಭೆ ಅಧಿವೇಶನದ ಮೊದಲ ದಿನವೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೆರೆ ರಾಜ್ಯ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿತ್ತು. ಕರ್ನಾಟಕದ ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪ ಮಾಡಿತ್ತು. ಮೇಕೆದಾಟು ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ನೀಡುವಂತೆ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿತ್ತು. ಆದರೆ ಪ್ರಸ್ತಾವನೆಗೆ ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದ ಕಾರಣ ಲೋಕಸಭೆ ಸದನದ ಬಾವಿಗಿಳಿದು ಡಿಎಂಕೆ‌ ಸಂಸದರು ಪ್ರತಿಭಟನೆ ನಡೆಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular