BIG NEWS: ಅ. 16ರಂದು ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ: 110 ಹಳ್ಳಿಗಳಿಗೆ ನೀರು

ಬೆಂಗಳೂರು: 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಗೆ ಅ. 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೈಕಾ) ಸಹಭಾಗಿತ್ವದಲ್ಲಿ ಒಟ್ಟು 4336 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಐದನೇ ಹಂತದ ಯೋಚನೆ ಕೈಗೆತ್ತಿಕೊಳ್ಳಲಾಗಿತ್ತು. ಈ ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿ ಯಾಗಿ 775 ಎಂಎಲ್ಡಿ ನೀರು ಲಭ್ಯವಾಗುತ್ತದೆ. 50 ಲಕ್ಷ ಜನರಿಗೆ ಉಪಯೋಗವಾಗಲಿದೆ.

ಬೆಂಗಳೂರು ಜಲ ಮಂಡಳಿಯ ಅಧ್ಯಕ್ಷ ಡಾ. ವಿ. ರಾಮಪ್ರಸಾತ್ ಮನೋಹರ್ ಅವರು ಮಂಗಳವಾರ ಸಿಎಂ ಮತ್ತು ಡಿಸಿಎಂ ಗೆ ಸಮಾರಂಭದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತೊರೆ ಕಾಡನಹಳ್ಳಿ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಅ. 16ರಂದು ಬೆಳಗ್ಗೆ 10.30 ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read