HomeKarnatakaBIG NEWS: ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಎರಡು ವರ್ಷಗಳ ಬಳಿಕ ಕೆ.ಆರ್.ಎಸ್. ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಜೀವನದಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲುಕಿನ ಕೆ.ಆರ್.ಎಸ್ ಜಲಾಶಯಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಕೆ.ಆರ್.ಎಸ್ ಜಲಾಶಯಕ್ಕೆ ಕ್ಷೀರಾಭಿಷೇಕ ಮಾಡಿ, ಪೂಷ್ಪಾರ್ಚನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ವೈದಿಕ ಭಾನು ಪ್ರಕಾಶ್ ಶರ್ಮಾ ಅವರ ಸಮ್ಮುಖದಲ್ಲಿ ಕಾವೇರಿ ನದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ಅಧಿಕಾರಿಗಳು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular