HomeKarnatakaಕಾವೇರಿ ನದಿ ನೀರು ವಿವಾದ: ಮಂಡ್ಯದಲ್ಲಿ ಮುಂದುವರೆದ ಕರವೇ, ರೈತರ ಪ್ರತಿಭಟನೆ: ತಮಿಳುನಾಡಿಗೆ ನೀರು ಹರಿಸದಂತೆ...

ಕಾವೇರಿ ನದಿ ನೀರು ವಿವಾದ: ಮಂಡ್ಯದಲ್ಲಿ ಮುಂದುವರೆದ ಕರವೇ, ರೈತರ ಪ್ರತಿಭಟನೆ: ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಟನೆಗಖು ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ಖಂಡಿಸಿ ಮಂಡ್ಯ ಮತ್ತು ಮೈಸೂರಿನಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಹಯುತ್ತಿವೆ.

ಮಂಡ್ಯದ ಸಂಜಯ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ಕುಡುಯುವ ನೀರಿಗೂ ಸಂಕಷ್ಟ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಲ್ಲ. ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಟ್ಟರೆ ನಮ್ಮ ರಾಜ್ಯದ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ವಾದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಮಳೆ ಬರುವ ಸಾಧ್ಯತೆ ಇರುವುದರಿಂದ ಅವರಿಗೆ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದರೆ, ಕರ್ನಾಟಕದಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ತೀವ್ರ ಸಮಸ್ಯೆ ಎದುರಾಗುತ್ತದೆ ಎಂದು ರೈತ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸಿಡಬ್ಲ್ಯೂಎಂಎ (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಮುಂದೆ ವಾಸ್ತವ ಸ್ಥಿತಿಯನ್ನು ಸರಕಾರ ಅರ್ಥ ಮಾಡಿಸಬೇಕು. ತಮಿಳುನಾಡಿನ ಹಿತಾಸಕ್ತಿ ಕಾಯುವ ಬದಲು ರಾಜ್ಯದ ಹಿತಾಸಕ್ತಿ ಕಾಯಬೇಕು ಎಂದು ಸರಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಮೈಸೂರಿನಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ತಕ್ಷಣ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular