ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ: ರಾಜ್ಯಕ್ಕೆ ಹೆಚ್ಚಿದ ಆತಂಕ

ನವದೆಹಲಿ: ಇಂದು ಮಧ್ಯಾಹ್ನ 2 ಗಂಟೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ(CWRC) ನಡೆಯಲಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ ಕಾಲ ಬಿಡುವಂತೆ ಆದೇಶಿಸಿದ್ದ ಸಮಿತಿ ಇಂದು ಆದೇಶವನ್ನು ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.

ಇಂದು ನಡೆಯಲಿರುವ ಸಭೆಯಲ್ಲಿ ರಾಜ್ಯದ ಪರವಾಗಿ ನೀರಾವರಿ ನಿಗಮದ ಎಂಡಿ ಮಹೇಶ್ ಭಾಗಿಯಾಗಲಿದ್ದಾರೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಇದೆ. ಮಳೆ ಹಾಗೂ ನೀರಿನ ಕೊರತೆ ಇದೆ. ಈ ಭಾಗದ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂಬ ಮಾಹಿತಿಯನ್ನು ಸಭೆಯ ಗಮನಕ್ಕೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಲ್ಲದೆ, ಮುಂದಿನ ವಾರದಿಂದ ತಮಿಳುನಾಡಿಗೆ ವಾಯುವ್ಯ ಮಾರುತಗಳಿಂದ ಮಳೆಯಾಗಲಿದ್ದು, ಅಲ್ಲಿನ ನೀರಿನ ಸಮಸ್ಯೆ ನಿವಾರಣೆ ಆಗುತ್ತದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರೆದಿರುವುದರಿಂದ ನೀರು ಬಿಡುವುದು ಕಷ್ಟವಾಗುತ್ತದೆ ಎಂದು ರಾಜ್ಯದ ಅಧಿಕಾರಿಗಳು ವಾದ ಮಂಡಿಸಲಿದ್ದಾರೆ.

ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಬಿಡುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿತ್ತು. ಇಂದಿನ ಸಭೆ ರಾಜ್ಯಕ್ಕೆ ಮತ್ತೆ ಆತಂಕ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read