HomeKarnatakaBIG NEWS: ಕಾವೇರಿ ಹೋರಾಟಕ್ಕೆ ವಿದ್ಯಾರ್ಥಿಗಳ ಬೆಂಬಲ; ಇಂದಿನಿಂದ ಮತ್ತಷ್ಟು ತೀವ್ರಗೊಳ್ಳಲಿದೆ ಪ್ರತಿಭಟನೆ

BIG NEWS: ಕಾವೇರಿ ಹೋರಾಟಕ್ಕೆ ವಿದ್ಯಾರ್ಥಿಗಳ ಬೆಂಬಲ; ಇಂದಿನಿಂದ ಮತ್ತಷ್ಟು ತೀವ್ರಗೊಳ್ಳಲಿದೆ ಪ್ರತಿಭಟನೆ

ಮಂಡ್ಯ: ಇಂದಿನಿಂದ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಕಾವೇರಿ ನದಿ ನೀರಿಗಾಗಿ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಾರೆ.

ಮಂಡ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಸ್ಥರು, ಕಾಲೇಜು ವಿದ್ಯಾರ್ಥಿಗಳು ರೈತರ ಹೋರಾಟಕ್ಕೆ ಸಾಥ್ ನೀಡಲಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ 47 ದಿನಗಳಿಂದ ನಿರಂತರವಾಗಿ ರೈತ ಹಿತರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ನಡೆಸುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಹಾಗೂ ತಮಿಳುನಾಡಿನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇಂದಿನಿಂದ ಈ ಪ್ರತಿಭಟನೆಯಲ್ಲಿ ಗ್ರಾಮಸ್ಥರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular