HomeLatest NewsBREAKING : ಕಾವೇರಿ ನೀರು ವಿವಾದ ; ಮಂಡ್ಯದಲ್ಲಿ ಮತ್ತೆ 'ವಾಟಾಳ್ ನಾಗರಾಜ್' ಪೊಲೀಸ್ ವಶಕ್ಕೆ...

BREAKING : ಕಾವೇರಿ ನೀರು ವಿವಾದ ; ಮಂಡ್ಯದಲ್ಲಿ ಮತ್ತೆ ‘ವಾಟಾಳ್ ನಾಗರಾಜ್’ ಪೊಲೀಸ್ ವಶಕ್ಕೆ |WATCH VIDEO

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ಕಾವೇರಿದೆ. ತಮಿಳುನಾಡಿಗೆ 15,000 ಕ್ಯೂಸೆಕ್ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಅವರ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯದ ಸಂಜಯ್ ಸರ್ಕಲ್ ಬಳಿ ಹಳೆಯ ಬೆಂಗಳೂರು-ಮೈಸೂರು ರಸ್ತೆಯನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದರೂ, ಇದೀಗ 15,000 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಟಾಳ್ ನಾಗರಾಜ್ ಸೇರಿದಂತೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 26ರಂದು ಕೆಆರ್‌ಎಸ್‌ನಲ್ಲಿ ಮತ್ತೊಂದು ಪ್ರತಿಭಟನೆ

ಈ ನಡುವೆ ವಾಟಾಳ್ ನಾಗರಾಜ್ ಅವರು ಆಗಸ್ಟ್ 26ರಂದು ಕೆಆರ್‌ಎಸ್ ಅಣೆಕಟ್ಟಿನ ಬಳಿ ಮತ್ತೊಂದು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಹೋರಾಟ ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ಸಂಘರ್ಷದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಈ ವಿವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular