HomeKarnatakaಕಾವೇರಿ ನೀರು ವಿವಾದ; ನಾಳೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್...

ಕಾವೇರಿ ನೀರು ವಿವಾದ; ನಾಳೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWRC ಹೊರಡಿಸಿರುವ ಆದೇಶ ಪಾಲನೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಿದ್ದಾರೆ.

ಇಂದು ಸಂಜೆ ದೆಹಲಿಗೆ ಪ್ರಯಾಣಿಸಲಿರುವ ಸಿಎಂ ಸಿದ್ದರಾಮಯ್ಯ ನಾಳೆ ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಲೋಕಸಭೆ ಸದಸ್ಯರು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular