ಕಾವೇರಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರೈತ ದೇಶದ ಬೆನ್ನೆಲುಬು, ಆ ರೈತರ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಬಾರಿ ಮಳೆಯ ಅಭಾವ ಇದ್ದು ರೈತರು ಸಂಕಷ್ಟದಲ್ಲಿದ್ದಾರೆ. ಎರಡೂ ರಾಜ್ಯದ ನಾಯಕರು ಹಾಗೂ ನ್ಯಾಯಾಲಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕೆಂಬುದು ನನ್ನ ಪ್ರಾರ್ಥನೆ ಎಂದು ತಿಳಿಸಿದ್ದಾರೆ. ಈ ಕುರಿತಾಗಿ ಶಿವರಾಜ್ ಕುಮಾರ್ ಅವರು ಎಕ್ಸ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ನಡೆಸಿದ್ದು, ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ. ಕನ್ನಡ ಚಿತ್ರರಂಗದ ನಟ, ನಟಿಯರು ಕಾವೇರಿ ಹೋರಾಟಕ್ಕೆ ಬೆಂಬಲಿಸುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ನಟರಾದ ಸುದೀಪ್ ಮತ್ತು ದರ್ಶನ್ ಕಾವೇರಿ ಹೋರಾಟ ಬೆಂಬಲಿಸಿದ್ದಾರೆ. ಚಿತ್ರರಂಗದ ಅನೇಕ ಕಲಾವಿದರು, ಪ್ರತಿನಿಧಿಗಳು ಕೂಡ ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

https://twitter.com/NimmaShivanna/status/1704474316405100653

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read