BIG NEWS: ಕಾವೇರಿ ಕಿಚ್ಚು: ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಭುಗಿಲೆದ್ದಿದೆ. ರೈತರ ಹೋರಾಟಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್ ನೀಡಿದ್ದಾರೆ.

ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿದ್ದಾರೆ. ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಸೇರಿದಂತೆ ಹಲವರು ಬೆಂಬಲ ನೀಡಿದ್ದಾರೆ.

ಈ ವೇಳೆ ಮಾತನಾಡಿದ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವವಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಹೇಳಿರುವುದು ರಾಜ್ಯದ ರೈತರು ತೊಂದರೆಗೆ ಸಿಲುಕುವಂತಾಗಿದೆ. ಇದೇ ಸ್ಥಿತಿ ಮುಂದುವರಿದರೆ ಬೆಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ರಾಜ್ಯ ಸರ್ಕಾರ ರಾಜ್ಯದ ವಾಸ್ತವಾಂಶವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಬೇಕು. ರೈತರ ಹಿತ ಕಾಯಲು ತಕ್ಷಣ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read