ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಆಗದೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದರೂ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಜನ ಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾದ ಪರಿಣಾಮ ಜಲಾಶಯಗಳಿಗೆ ಅಲ್ಪ ಪ್ರಮಾಣದ ನೀರು ಹರಿದು ಬಂದಿದೆ ಇದರಿಂದ ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆ ಆಗುವುದಿಲ್ಲ ಎಂದು ಹೇಳಿದರು..
ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ ಇದ್ದರೂ ಸದ್ಯಕ್ಕೆ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಕುಡಿಯುವ ಬಳಕೆಗೆ ಬಳಸಿಕೊಳ್ಳಬಹುದು ನಾಲಿಗೆ ನೀರು ಹರಿಸಿಲ್ಲ ದಿನಗಳಲ್ಲಿ ಉತ್ತಮ ಮಳೆಯಾದರೆ ಗಮನಹರಿಸುವುದಾಗಿ ತಿಳಿಸಿದರು.
ಕೆಆರ್‌ಎಸ್ ಅಣೆಕಟ್ಟಿನಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ಈ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲಗಳನ್ನು ಹರಿಸುತ್ತಿದ್ದಾರೆ ನಮ್ಮ ಜಲಾಶಯಗಳಲ್ಲಿ ನೀರು ಇಲ್ಲದಿರುವಾಗ ನೆರೆಯ ರಾಜ್ಯಕ್ಕೆ ನೀರು ಹರಿಸುವುದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದರು.
ಕಾವೇರಿ ಮತ್ತು ಕೃಷ್ಣ ಪ್ರದೇಶಗಳಲ್ಲಿ ಮುಂದಿನ ವಾರದಿಂದ ಉತ್ತಮ ಮಳೆ ಯಾಗಬಹುದು ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ನಮಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೆ ಉಂಟಾಗಿರುವ ಸಮಸ್ಯೆಗಳು ಬಗೆಹರಿಯಲ್ಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಬಿಜೆಪಿಗೆ ತಿರುಗೇಟು
ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಯನ್ನು ಸಚಿವರು “ನಾಟಕ” ಎಂದು ಜರಿದರು.
“2006ರಲ್ಲಿ ಯಡಿಯೂರಪ್ಪ, ಅಶೋಕ್ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಟೌನ್‌ಶಿಪ್ ಘೋಷಣೆಯಾಗಿತ್ತು. 11 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಇದನ್ನು ರದ್ದು ಮಾಡುವ ಧೈರ್ಯ ಮಾಡದವರು, ಈಗ ಪ್ರತಿಭಟನೆ ಮಾಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದರು.
ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲಾಗಿದೆ ಎಂಬ ದೇವೇಗೌಡರ ಆರೋಪವನ್ನು ತಳ್ಳಿಹಾಕಿದ ಅವರು, ಟೌನ್‌ಶಿಪ್ ಘೋಷಣೆಯಾದಾಗ ಇವರು ಯಾರಿಗಾದರೂ ಕಪ್ಪ ಕಾಣಿಕೆ ಕೊಟ್ಟಿದ್ದರೇ ಎಂದು ಮರುಪ್ರಶ್ನೆ ಹಾಕಿದರು.
ಪುಟ್‌ಪಾತ್ ತೆರವು ಕಾರ್ಯಾಚರಣೆ ಬಗ್ಗೆ ಮಾತನಾಡಿದ ಸಚಿವರು, “ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಬೇರೆ ನಗರಗಳಲ್ಲಿರುವಂತೆ ಇಲ್ಲಿಯೂ ‘ಹಾಕರ್ಸ್ ಝೋನ್’ಗಳನ್ನು ಗುರುತಿಸಿ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ವ್ಯಾಪಾರಿಗಳಿಗೆ ಉದ್ಯೋಗಾವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ” ಎಂದು ಅಭಿಪ್ರಾಯಪಟ್ಟರು.
ರಾಜಕೀಯ ಟೀಕೆಗಳು ಮತ್ತು ಚುನಾವಣೆ
ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ ಎಂದು ವ್ಯಂಗ್ಯವಾಡಿದ ಸಚಿವರು, “ಬಿಜೆಪಿಯವರು ಕೇವಲ ಮಾತುಗಾರರು. ಮಾತಿನಿಂದಲೇ ವೋಟು ಗಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಮುಂಬರುವ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳಿಸುವ ಸ್ಕೆಚ್ ಬಗ್ಗೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಐಟಿ, ಇಡಿ, ಸಿಬಿಐಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಜಿಬಿಎ ಚುನಾವಣೆ:
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಡಿಸೆಂಬರ್ ಒಳಗೆ ಚುನಾವಣೆ ನಡೆಸಲಾಗುವುದು. ಎಸ್.ಐ.ಆರ್ (SIR) ಮತ್ತು ವೋಟರ್ ಲಿಸ್ಟ್ ಪರಿಷ್ಕರಣೆಯಿಂದಾಗಿ ವಿಳಂಬವಾಗಿದೆ.
ಪ್ರಧಾನಿ ಮೋದಿ ಭೇಟಿ: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನ ರಾಮಕೃಷ್ಣ ಆಶ್ರಮದ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಸಂಪುಟ ವಿಸ್ತರಣೆ: 20 ಸಚಿವ ಸ್ಥಾನಗಳ ಭರ್ತಿ ಮತ್ತು ಖಾತೆ ಬದಲಾವಣೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ತಿಳಿಸಿದರು.

