HomeIndiaಚಾಮರಾಜನಗರದಲ್ಲಿ ಮೂವರು ತಮಿಳರ ಹತ್ಯೆ: ಕರ್ನಾಟಕ ಅರಣ್ಯ ಇಲಾಖೆ ವಿರುದ್ಧ ಸಿಎಂ ವಿಜಯ್ ಆಕ್ರೋಶ

ಚಾಮರಾಜನಗರದಲ್ಲಿ ಮೂವರು ತಮಿಳರ ಹತ್ಯೆ: ಕರ್ನಾಟಕ ಅರಣ್ಯ ಇಲಾಖೆ ವಿರುದ್ಧ ಸಿಎಂ ವಿಜಯ್ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಮೂವರು ತಮಿಳರು ಮೃತಪಟ್ಟಿರುವ ಘಟನೆಗೆ ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಯಿಂದಲೇ ಮೂವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ವಿಜಯ್, ಈ ಕುರಿತು ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರು, ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮೂವರು ತಮಿಳರು ಹತ್ಯೆಗೀಡಾದ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಭಾನುವಾರ ರಾತ್ರಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ವಿಜಯ್, ತಮಿಳುನಾಡಿಗೆ ಸೇರಿದ ಆ್ಯಂಥನಿ ಸಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಅವರು ಕರ್ನಾಟಕದ ಹನೂರು ತಾಲ್ಲೂಕಿನಲ್ಲಿ ವಾಸಿಸುತ್ತಿದ್ದರು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಮೃತಪಟ್ಟಿದ್ದಾರೆ. ಈ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಘಟನೆಯ ಕುರಿತು ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ ಎಂದು ವಿಜಯ್ ಹೇಳಿದ್ದಾರೆ. ಘಟನೆಯ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ಸ್ಪಷ್ಟೀಕರಣದ ಬಗ್ಗೆಯೂ ವಿಜಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸುತ್ತೇನೆ”: ತಮಿಳುನಾಡು ಸಿಎಂ ವಿಜಯ್

ಆಗಸ್ಟ್ 15, 2026ರ ಮುಂಜಾನೆ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗ್ರಾಮಗಳಲ್ಲಿ ವಾಸಿಸುತ್ತಿದ್ದ ತಮಿಳರಾದ ಆ್ಯಂಟನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರನ್ನು ಕಾವೇರಿ ವನ್ಯಜೀವಿ ಧಾಮದ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದು ಹೃದಯವಿದ್ರಾವಕ ಘಟನೆ. ಈ ಹತ್ಯಾಕಾಂಡವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ.

ಈ ಕ್ರೂರ ಘಟನೆಯ ಕುರಿತು ಪ್ರಾಮಾಣಿಕ ತನಿಖೆ ನಡೆಸಬೇಕು. ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿ, ಘಟನೆಗೆ ಹೊಣೆಗಾರರಾದವರ ವಿರುದ್ಧ ಸೂಕ್ತ ಕ್ರಮ ಹಾಗೂ ಶಿಕ್ಷೆ ವಿಧಿಸಬೇಕು. ಮೃತರ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಬೇಕು. ಇಂತಹ ಘಟನೆಗಳು ಮತ್ತೆ ನಡೆಯದಂತೆ ಕರ್ನಾಟಕ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾನು ಬಲವಾಗಿ ಒತ್ತಾಯಿಸುತ್ತೇನೆ ಎಂದು ಸಿಎಂ ವಿಜಯ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

https://twitter.com/TVKVijayHQ/status/2089021108586795396

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular