ಮಾಜಿ ಸಂಸದನ ಹತ್ಯೆ ಪ್ರಕರಣದಲ್ಲಿ ಆಂಧ್ರ ಸಿಎಂ ಅಂಕಲ್ ಅರೆಸ್ಟ್

ಕಡಪ(ಆಂಧ್ರಪ್ರದೇಶ): ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್. ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರ ತನಿಖಾ ದಳ(ಸಿಬಿಐ) ಭಾನುವಾರ ಬಂಧಿಸಿದೆ.

ಮೃತ ವೈ.ಎಸ್. ವಿವೇಕಾನಂದ ರೆಡ್ಡಿ ಅವರು ಮಾಜಿ ಶಾಸಕ, ಮಾಜಿ ಸಂಸದರು. ಅವರು ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದರು. ಅವರು ಮಾರ್ಚ್ 15, 2019 ರಂದು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಭಾಸ್ಕರ್ ರೆಡ್ಡಿ ಅವರನ್ನು ಸಿಬಿಐ ಬಂಧಿಸಿದರು ಬಗ್ಗೆ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಜನವರಿಯಲ್ಲಿ ವೈ.ಎಸ್. ವಿವೇಕಾನಂದ ರೆಡ್ಡಿ ಹತ್ಯೆಗೆ ಸಂಬಂಧಿಸಿದಂತೆ ಗಂಗಿ ರೆಡ್ಡಿಗೆ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಸಲ್ಲಿಸಿದ ಮನವಿಯನ್ನು ಅರ್ಹತೆಯ ಆಧಾರದ ಮೇಲೆ ಹೊಸದಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ತೆಲಂಗಾಣ ಹೈಕೋರ್ಟ್‌ಗೆ ಕೇಳಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read