HomeKarnatakaBREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ...

BREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಾಸ್ ಪಡೆಯಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬಹುದಾಗಿತ್ತು. ಇದಕ್ಕೆ ಸರ್ಕಾರ ನೇರವಾಗಿ ಅವಕಾಶ ಮಾಡಿಕೊಟ್ಟಿತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular