HomeIndia5 ದಿನ ಸಿಬಿಐ ಕಸ್ಟಡಿಗೆ ಡಿಸಿಎಂ ಮನೀಶ್ ಸಿಸೋಡಿಯಾ

5 ದಿನ ಸಿಬಿಐ ಕಸ್ಟಡಿಗೆ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ.

ಮಾರ್ಚ್ 4 ರವರೆಗೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ. ಸಿಬಿಐನಿಂದ ನಿನ್ನೆ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಸಿಬಿಐ ವಶಕ್ಕೆ ಕೇಳಿದ್ದು, ಮನವಿ ಸ್ವೀಕರಿಸಿದ ದೆಹಲಿ ರೋಸ್ ಅವೆನ್ಯೂ ಕೋರ್ಟ್ ಮಾರ್ಚ್ 4ರವರೆಗೆ ಕಸ್ಟಡಿಗೆ ನೀಡಿದೆ. ಸಿಬಿಐ ಸಿಸೋಡಿಯಾ ಅವರನ್ನು ವಿಚಾರಣೆಗೊಳಪಡಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular