ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ವಿರುದ್ಧ ಸಿಬಿಐ(CBI) ಪ್ರಕರಣ ದಾಖಲಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ನಂತರ, ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ನಂತರ ಡಿಆರ್ ಐ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಸದ್ಯ, ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ (DRI) ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.
