CBSE 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಇಂದು 12 ನೇ ತರಗತಿ ಮತ್ತು 10ನೇ ತರಗತಿ ಫಲಿತಾಂಶಗಳನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ – cbseresults.nic.in ಮತ್ತು cbse.digitallocker.gov.in ಹಾಗು cbse.gov.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಈ ವರ್ಷ 12 ನೇ ತರಗತಿಯ ಒಟ್ಟಾರೆ ಉತ್ತೀರ್ಣ ಶೇಕಡಾ 87.33 ರಷ್ಟಿದೆ, ಇದು ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಹುಡುಗಿಯರು ಶೇಕಡಾ 90.68 ರಷ್ಟು ಉತ್ತೀರ್ಣರಾಗುವುದರೊಂದಿಗೆ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 84.67 ಹುಡುಗರು CBSE 12 ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ತಿರುವನಂತಪುರವು ಅತ್ಯುತ್ತಮ ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ. ಬೆಂಗಳೂರು ಮತ್ತು ಚೆನ್ನೈ ನಂತರದ ಸ್ಥಾನದಲ್ಲಿದೆ.

CBSE ತರಗತಿಯ 12 ಪರೀಕ್ಷೆಗಳನ್ನು ಫೆಬ್ರವರಿ 15 ರಿಂದ ಏಪ್ರಿಲ್ 5 ರವರೆಗೆ ನಡೆಸಲಾಗಿತ್ತು. ಫಲಿತಾಂಶಗಳು UMANG ಆಪ್, ಡಿಜಿಲಾಕರ್‌ನಲ್ಲಿಯೂ ಲಭ್ಯವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read