HomeIndiaಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಉದ್ದೇಶದ ನಾಮ ಮಾತ್ರ ಶಾಲೆ ವಿದ್ಯಾರ್ಥಿಗಳಿಗೆ ಶಾಕ್: 12ನೇ ತರಗತಿ ಪರೀಕ್ಷೆ...

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಉದ್ದೇಶದ ನಾಮ ಮಾತ್ರ ಶಾಲೆ ವಿದ್ಯಾರ್ಥಿಗಳಿಗೆ ಶಾಕ್: 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ

ನವದೆಹಲಿ: ನಾಮ ಮಾತ್ರ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು CBSE ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂತಹ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಅದಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರೇ ಹೊಣೆ ಎಂದು CBSE ಸ್ಪಷ್ಟಪಡಿಸಿದೆ. CBSE ಪರೀಕ್ಷೆ ಬರೆಯಲು ಅವಕಾಶ ನೀಡುವ ಏಕೈಕ ಉದ್ದೇಶದಿಂದ ಪ್ರವೇಶ ನೀಡಿ ತರಗತಿಗೆ ಹಾಜರಾಗುವುದರಿಂದ ಸಂಪೂರ್ಣವಾಗಿ ವಿನಾಯಿತಿ ನೀಡುವ ಶಾಲೆಗLu ನಾಮ ಮಾತ್ರದ ಶಾಲೆಗಳಾಗಿವೆ.

ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಿದ್ಧತೆ ನಡೆಸುವ ಅನೇಕ ವಿದ್ಯಾರ್ಥಿಗಳು ಇಂತಹ ಶಾಲೆಗಳಲ್ಲಿ ಪ್ರವೇಶ ಪಡೆಯುತ್ತಾರೆ. ಅವರು ಶಾಲೆಗೆ ಹಾಜರಾಗದೆ ತಮ್ಮ ಪೂರ್ಣ ಸಮಯವನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಇಂತಹ ಶಾಲೆಗಳು ಅವರಿಗೆ ನೇರವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತವೆ. ಇಂತಹ ನಾಮ ಮಾತ್ರದ ಶಾಲೆಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿರುವ CBSE ಅಂತಹ ಶಾಲೆಗಳು ವಿದ್ಯಾರ್ಥಿಗಳು ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಹಾಜರಾಗುವುದನ್ನು ತಡೆಯಲು ಪರೀಕ್ಷಾ ಉಪ ನಿಯಮಗಳಿಗೆ ಬದಲಾವಣೆ ತರಲು ಚಿಂತನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತಹ ವಿದ್ಯಾರ್ಥಿಗಳು NIPS ಪರೀಕ್ಷೆ ಬರೆಯಬೇಕಿದೆ. 2025- 26ನೇ ಶೈಕ್ಷಣಿಕ ಸಾಲಿನಿಂದ ಈ ನಿರ್ಧಾರ ಜಾರಿಗೆ ಶಿಫಾರಸು ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇಕಡ 75 ರಷ್ಟು ಹಾಜರಾತಿ ಕಡ್ಡಾಯ. ಇಲ್ಲದಿದ್ದರೆ ಅವಕಾಶ ಸಿಗುವುದಿಲ್ಲವೆಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular