ನವದೆಹಲಿ: 2026- 27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ(ಓಪನ್ ಬುಕ್) ಪರೀಕ್ಷೆ ಜಾರಿಗೊಳಿಸಲು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಸಿಬಿಎಸ್ಇ ನಿರ್ಧಾರ ಕೈಗೊಂಡಿದೆ.
ಈ ಹೊಸ ನೀತಿ ಜಾರಿಯಾದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ.
ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು -2023 ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಮನ್ವಯದೊಂದಿಗೆ ಹೊಸ ಪಠ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.
ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಹೊಸ ನೀತಿಯು ಸಾಮರ್ಥ್ಯ ಆಧಾರಿತ ಕಲಿಕೆಗೆ ಮಹತ್ವ ಕೊಡುತ್ತದೆ. ಮುಖ್ಯ ಕಲಿಕಾ ವಿಷಯಗಳಾದ ಭಾಷೆ, ಗಣಿತ, ವಿಜ್ಞಾನ ಸಮಾಜ ವಿಜ್ಞಾನವನ್ನು ಇದು ಒಳಗೊಳ್ಳಲಿದೆ. ಈ ಕ್ರಮವನ್ನು ಆಯ್ಕೆ ಮಾಡಿಕೊಳ್ಳುವ ಅಥವಾ ಬಿಡುವ ಸ್ವಾತಂತ್ರ್ಯವನ್ನು ಶಾಲೆಗಳಿಗೇ ನೀಡಲಾಗಿದೆ.