HomeKarnatakaಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ.

ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಬೇಡ, ಪರೀಕ್ಷೆ ಆರಂಭಕ್ಕೆ ಒಂದು ಗಂಟೆ ಮೊದಲೇ ಕೇಂದ್ರಕ್ಕೆ ಹೋಗಿ. ಹಾಲ್ ಟಿಕೆಟ್, ಪೆನ್ನು ತೆಗೆದುಕೊಂಡು ಹೋಗಿ.

ವೆಬ್ ಕಾಸ್ಟಿಂಗ್ ಕಣ್ಗಾವಲು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರೀಕ್ಷಾ ಅಕ್ರಮ ತಡೆಗೆ ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಾರಿಗೊಳಿಸಿದ್ದ ವೆಬ್ ಕಾಸ್ಟಿಂಗ್ ಕಣ್ಗಾವಲನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿಸ್ತರಿಸಲಾಗಿದೆ. ಈ ವ್ಯವಸ್ಥೆ ಜಾರಿಯಿಂದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

1171 ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಯಾವುದೇ ಕೊಠಡಿಯಲ್ಲಿ ವಿದ್ಯಾರ್ಥಿ ಮಾತನಾಡುವುದು, ನಕಲು ಮಾಡುವುದು, ಕಾಪಿ ಚೀಟಿ ಇಟ್ಟುಕೊಂಡು ಪರೀಕ್ಷೆ ಬರೆಯುವುದು ಇತರೆ ಯಾವುದೇ ಅಕ್ರಮ ನಡೆದರೆ ಅದನ್ನು ವೆಬ್ ಕಾಸ್ಟಿಂಗ್ ಮೂಲಕ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಗಳಲ್ಲಿ ಗಮನಿಸಬಹುದು. ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

7.13 ಲಕ್ಷ ವಿದ್ಯಾರ್ಥಿಗಳ ನೋಂದಣಿ

7.13 862 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ತರಗತಿ ವಿದ್ಯಾರ್ಥಿಗಳಿದ್ದಾರೆ. 34,071 ಪುನರಾವರ್ತಿತ, 18,317 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ಐವರು ತೃತೀಯ ಲಿಂಗಿಗಳಿದ್ದಾರೆ

ಪರೀಕ್ಷಾ ವೇಳಾಪಟ್ಟಿ

ಮಾರ್ಚ್ 1, 2025 ರಂದು ಕನ್ನಡ ಮತ್ತು ಅರೆಬಿಕ್ ವಿಷಯ, ಮಾರ್ಚ್ 3 ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ಹಾಗೂ ಮಾರ್ಚ್ 4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ವಿಷಯದ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್ 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 7 ರಂದು ಇತಿಹಾಸ, ಭೌತಶಾಸ್ತ್ರ, ಮಾರ್ಚ್ 10 ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮತ್ತು ಗೃಹ ವಿಜ್ಞಾನ, ಮಾರ್ಚ್ 12 ರಂದು ಮನಃಶಾಸ್ತ್ರ, ರಾಸಾಯನಶಾಸ್ತ್ರ ಮತ್ತು ಮೂಲ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.

ಮಾರ್ಚ್ 13 ರಂದು ಅರ್ಥಶಾಸ್ತ್ರ, ಮಾರ್ಚ್ 15 ರಂದು ಇಂಗ್ಲಿಷ್, ಮಾರ್ಚ್ 17 ರಂದು ಭೂಗೋಳಶಾಸ್ತ್ರ, ಮಾರ್ಚ್ 18 ರಂದು ಜೀವಶಾಸ್ತ್ರ ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮಾರ್ಚ್ 19 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ ರೀಟೈಲ್, ಆಟೋಮೊಬೈಲ್ ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‍ನೆಸ್ ಹಾಗೂ ಮಾರ್ಚ್ 20 ರಂದು ಹಿಂದಿ ಪರೀಕ್ಷೆ ನಡೆಯಲಿವೆ.

ಪರೀಕ್ಷಾ ಕೇಂದ್ರದೊಳಗೆ ಈ ನಿಯಮ ಪಾಲನೆ ಕಡ್ಡಾಯ

ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.

ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ

ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಉಚಿತ ಪ್ರಯಾಣ

ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular