HomeLatest NewsBREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ 'CCB' ದಾಳಿ; ಪ್ರಜ್ವಲ್ ರೇವಣ್ಣ ಇದ್ದ...

BREAKING : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ದಾಳಿ; ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ನಡೆಸಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವುದು ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಇರಿಸಲಾಗಿದ್ದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲಿದ್ದಾಗ ಮೊಬೈಲ್ ಬಳಸುತ್ತಿದ್ದರೇ ಎಂಬ ಅನುಮಾನವೂ ಮೂಡಿದೆ. ಈ ಕುರಿತು ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಿಸಿಬಿ ಅಧಿಕಾರಿಗಳು ವಿವಿಧ ಬ್ಯಾರಕ್ ನಲ್ಲಿ 10 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಜೈಲಿನಲ್ಲಿ ನಿಷೇಧಿತ ಮೊಬೈಲ್ ಫೋನ್ ಪತ್ತೆಯಾಗಿರುವುದರಿಂದ ಅದನ್ನು ಯಾರು ಬಳಸುತ್ತಿದ್ದರು? ಮೊಬೈಲ್ ಯಾರಿಗೆ ಸೇರಿದ್ದು? ಅದನ್ನು ಜೈಲಿನೊಳಗೆ ಹೇಗೆ ತರಲಾಯಿತು? ಎಂಬ ಹಲವು ಪ್ರಶ್ನೆಗಳು ಇದೀಗ ಎದುರಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊಬೈಲ್ ಫೋನ್‌ನಲ್ಲಿರುವ ಮಾಹಿತಿ, ಕರೆ ವಿವರಗಳು ಹಾಗೂ ಇತರ ತಾಂತ್ರಿಕ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ಇದರ ಆಧಾರದ ಮೇಲೆ ಮೊಬೈಲ್ ಬಳಕೆಯ ಹಿಂದೆ ಯಾರಾದರೂ ಇದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ

ಮಂಗಳವಾರ (ಆಗಸ್ಟ್ 11) ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಪ್ರತಿಯೊಂದು ಬ್ಯಾರಕ್‌ನಲ್ಲೂ ದಿಢೀರ್ ಶೋಧ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಇರಿಸಲಾಗಿದ್ದ ಬ್ಯಾರಕ್‌ನಲ್ಲಿ ಆ್ಯಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿದೆ. ಮೊಬೈಲ್‌ ಅನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಅದರ ಬಳಕೆ ಮತ್ತು ಅದು ಜೈಲಿನೊಳಗೆ ಬಂದಿರುವ ರೀತಿಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಮೊಬೈಲ್ ಕೊಟ್ಟವರು ಯಾರು?

ಅತ್ಯಾಚಾರ ಪ್ರಕರಣದಲ್ಲಿ ಸಜಾ ಕೈದಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಪ್ರತ್ಯೇಕ ಬ್ಯಾರಕ್‌ ವ್ಯವಸ್ಥೆ ಮಾಡಲಾಗಿದೆ. ಇಂತಹ ಭದ್ರತಾ ವ್ಯವಸ್ಥೆಯ ನಡುವೆಯೂ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಮೊಬೈಲ್‌ ಅನ್ನು ಯಾರು ಜೈಲಿನೊಳಗೆ ತಂದರು? ಪ್ರಜ್ವಲ್ ರೇವಣ್ಣ ಅವರು ಅದನ್ನು ಎಷ್ಟು ದಿನಗಳಿಂದ ಬಳಸುತ್ತಿದ್ದರು? ಮೊಬೈಲ್‌ ಅವರಿಗೆ ಹೇಗೆ ತಲುಪಿತು? ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲೇ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕರಣದಲ್ಲಿ ಅವರ ಪಾತ್ರವಿದೆಯೇ ಅಥವಾ ಬೇರೆ ಯಾವುದೇ ಕೈವಾಡವಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಪತ್ತೆಯಾಗಿರುವ ಪ್ರಕರಣವನ್ನು ಸಿಸಿಬಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಜೈಲಿನ ಭದ್ರತಾ ವ್ಯವಸ್ಥೆ ಹಾಗೂ ಮೊಬೈಲ್ ಜೈಲಿನೊಳಗೆ ಪ್ರವೇಶಿಸಿದ ರೀತಿಯ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ ಮೊಬೈಲ್ ಯಾರದ್ದು ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ. ಸಿಸಿಬಿ ತನಿಖೆ ಪೂರ್ಣಗೊಂಡ ಬಳಿಕವೇ ಪ್ರಕರಣದ ಸಂಪೂರ್ಣ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular