BIG NEWS : ಉಗ್ರರಿಗಾಗಿ ‘ಸಿಸಿಬಿ’ ತೀವ್ರ ಶೋಧ : ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರ ವಶಕ್ಕೆ

ದಾವಣಗೆರೆ : ಐವರು ಶಂಕಿತ ಉಗ್ರರ ಬಂಧನ ಬೆನ್ನಲ್ಲೇ ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ದಂಧೆಯಲ್ಲಿ ತೊಡಗಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಯಾಸ್ ಫಯಾಜ್ (30) ಸಿಸಿಬಿ ಬಲೆಗೆ ಬಿದ್ದಿದ್ದು, ಇದುವರೆಗೆ ತನಿಖೆಯಲ್ಲಿ ಉಗ್ರರ ಬಂಧನಕ್ಕೂ ಫಯಾಜಿಗೂ ನಂಟು ಇರುವುದು ಪತ್ತೆಯಾಗಿಲ್ಲ, ಆತನನ್ನು ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿ ಬೆಂಗಳೂರಿನ ಎನ್ ಐ ಎ ಕೋರ್ಟ್ ಗೆ ಹಾಜರುಪಡಿಸಿದೆ.ವಿಚಾರಣೆ ನಡೆಸಿದ ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.ಹೋಟೆಲ್, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳೇ ಶಂಕಿತ ಉಗ್ರರ ಟಾರ್ಗೆಟ್ ಆಗಿದ್ದು, ಜನಸಂಖ್ಯೆ ಹೆಚ್ಚಿರುವ ಬಸ್ ನಿಲ್ದಾಣ ಹಾಗೂ ಹೋಟೆಲ್ ಗಳಲ್ಲಿ ಬಾಂಬ್ ಸ್ಪೋಟಿಸಲು ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆ ರಾಜ್ಯದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿದೆ.

.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read