BREAKING : ಬೆಂಗಳೂರಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : ನೈಜೀರಿಯಾ ಮೂಲದ ಇಬ್ಬರು ಡ್ರಗ್ ಪೆಡ್ಲರ್’ ಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನೈಜೀರಿಯಾ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಹೆಸರ ಘಟ್ಟದಲ್ಲಿ ಸಿಸಿಬಿ ದಾಳಿ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ 1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡು  ಇಬ್ಬರನ್ನು ಬಂಧಿಸಿದೆ.ಬಂಧಿತರನ್ನು ಡೇವಿಡ್ ಹಾಗೂ ಕೋಫಿ ಎಂದು ಗುರುತಿಸಲಾಗಿದೆ.  ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೈಕ್ಷಣಿಕ ವೀಸಾ ಮೂಲಕ ಭಾರತಕ್ಕೆ ಬಂದಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳು ಹಣ ಮಾಡುವ ಉದ್ದೇಶದಿಂದ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ 1 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡು  ಇಬ್ಬರನ್ನು ಬಂಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read