ವೇಶ್ಯಾವಾಟಿಕೆ ಅಡ್ಡೆ ಮೇಲಿನ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಮಹತ್ವದ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಬಾಂಗ್ಲಾದೇಶ ಮೂಲದ ಯುವತಿಯರ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿವೆ. ಬಾಂಗ್ಲಾ ಪ್ರಜೆ ಕಮಲ್ ಎಂಬ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುತ್ತಿರುವ ವಿಚಾರ ಗೊತ್ತಾಗಿದೆ.

ತನಿಖೆ ಮುಂದುವರೆಸಿದ ಸಿಸಿಬಿ ಪೊಲೀಸರು ನಕಲಿ ಆಧಾರ್ ಜಾಲ ಪತ್ತೆ ಮಾಡಿದ್ದಾರೆ. ನಕಲಿ ಆಧಾರ್ ದಾಖಲೆಗಳನ್ನು ಸೃಷ್ಟಿಸುತ್ತಿದ್ದವರನ್ನು ಬಂಧಿಸಿದ್ದಾರೆ. ನಕಲಿ ಆಧಾರ್ ಮಾಡಿಕೊಟ್ಟ ಆರೋಪಿಗಳು ಸಚಿವ ಬೈರತಿ ಸುರೇಶ್ ಆಪ್ತರು ಎನ್ನಲಾಗಿದ್ದು, ಈ ವಿಚಾರವೀಗ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read