HomeLatest Newsಸಿಸಿಬಿ ಪೊಲೀಸರ ಭರ್ಜರಿ ಬೇಟೆ: 123 ಕೆಜಿ ಗಾಂಜಾ ವಶ, ಮೂವರು ಅರೆಸ್ಟ್

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 123 ಕೆಜಿ ಗಾಂಜಾ ವಶ, ಮೂವರು ಅರೆಸ್ಟ್

ಮಂಗಳೂರು: ಸಿಸಿಬಿ ಪೊಲೀಸರು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ 123 ಕೆಜಿ ಗಾಂಚಾ ಹಾಗೂ ಎರಡು ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಕಾಸರಗೋಡು ಮೂಲದ ಮಸೂದ್ ಎಂ.ಕೆ.(45), ಮಹಮ್ಮದ್ ಆಶಿಕ್(24) ಹಾಗೂ ಸುಬೇರ್(30) ಬಂಧಿತ ಆರೋಪಿಗಳು. ಮೂಡಬಿದರೆಯ ಬೆಳುವಾಯಿಯ ಕಾಂತಾವಾರ ಕ್ರಾಸ್‌ನ ಮರದಕೆರೆ ಬಳಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ಮಾಲು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 123 ಕೆಜಿ ಗಾಂಜಾ, 2 ವಾಹನ, 5 ಮೊಬೈಲ್ ಸೇರಿ 46.20 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆಯಲಾಗಿದೆ. ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular