ವೀಕೆಂಡ್ ಪಾರ್ಟಿ ನೆಪದಲ್ಲಿ ವೇಶ್ಯಾವಾಟಿಕೆ, ಡ್ರಗ್ಸ್ ಸೇರಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯ ವಿವಿಧೆಡೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹಲವು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೇಶ್ಯಾವಾಟಿಕೆ, ಡ್ರಗ್ಸ್ ಸೇವನೆ ಸೇರಿದಂತೆ ಅನೈತಿಕ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ವೀಕೆಂಡ್ ಪಾರ್ಟಿ ಹೆಸರಲ್ಲಿ ವೇಶ್ಯಾವಾಟಿಕೆ. ಮಾದಕ ದಂಧೆ ನಡೆಸಲಾಗುತ್ತಿತ್ತು. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ 25ಕ್ಕೂ ಅಧಿಕ ಶಂಕಿತರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಇವರಲ್ಲಿ ಐವರು ವಿದೇಶಿ ಪ್ರಜೆಗಳು ಸೇರಿ ಆರು ಜನ ಮಾದಕ ಪದಾರ್ಥ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿದೆ. ಇಬ್ಬರು ವಿದೇಶಿ ಪ್ರಜೆಗಳ ವೀಸಾ ಅವಧಿ ಮುಕ್ತಾಯವಾದ ನಂತರವೂ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read