HomeKarnatakaBIG NEWS: ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಮಕ್ಕಳ ರಕ್ಷಣೆ

BIG NEWS: ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಮಕ್ಕಳ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು ಸಿಸಿಬಿ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಕ್ಕಳು ಭಿಕ್ಷಾಟನೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಅಧಿಕಾರಿಗಳು 47 ಮಕ್ಕಳನ್ನು ರಕ್ಷಿಸಿದ್ದಾರೆ. ಪ್ರಕರಣ ಸಂಬಂಧ 36 ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

1 ತಿಂಗಳಿಂದ 12 ತಿಂಗಳ ವಯಸ್ಸಿನ 4 ಗಂಡು ಹಾಗೂ 2 ಹೆಣ್ಣು ಮಕ್ಕಳು, 1-3 ವರ್ಷದ 6 ಗಂಡು ಮಕ್ಕಳು, 6 ಹೆಣ್ಣು ಮಕ್ಕಳು, 3-6 ವರ್ಷದ 4 ಹೆಣ್ಣು, 2 ಗಂಡು ಮಕ್ಕಳು ಹಾಗೂ 6 ವರ್ಷ ಮೇಲ್ಪಟ್ಟ 5 ಹೆಣ್ಣು, 18 ಗಂಡು ಮಕ್ಕಳು ಸೇರಿದಂತೆ ಹಲವು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular