ಬೆಂಗಳೂರು : ಬೆಂಗಳೂರಿನಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು 5 ಲಕ್ಷ ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಿಕೊಂಡಿದ್ದಾರೆ.
ನಗರದ ಹಲವು ಅಂಗಡಿಗಳಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಿಷೇಧಿತ ಇ ಸಿಗರೇಟ್ ಹಾಗೂ ಭರ್ತಿ ಮಾಡುವ ಫಿಲಿಂಗ್ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇ ಸಿಗರೇಟ್ ಜಪ್ತಿ ಮಾಡಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ಅಮೀದ್ (26) ಅರ್ಫತ್ (23) ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.