ಬೆಂಗಳೂರು: ಸ್ಪಾ ಹಾಗೂ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಬಾಗಲಗುಂಟೆ, ಬ್ಯಾಡರಹಳ್ಳಿ, ಹೆಚ್ಎಎಲ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆರು ಜನ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.
ಮಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಸ್ಪಾ ಮತ್ತು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದೆ.

