ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಬಾಡಿಗೆ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿದೆ.
ದಾಳಿಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ವೇಶ್ಯಾವಾಟಿಕೆ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭನಗರ, ಆರ್.ಕೆ. ಲೇಔಟ್ ಜಾಲಹಳ್ಳಿ ಠಾಣೆ ವ್ಯಾಪ್ತಿಯ ಪೂರ್ಣಾಪುರ ಗೋಕುಲ ಸುಂದರನಗರ, ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಎನ್.ಜಿ.ಇ.ಎಫ್. ಲೇಔಟ್ ಗಳಲ್ಲಿ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡಿದೆ.

