HomeIndiaCCTV ಯಲ್ಲಿ ಬಯಲಾಯ್ತು ಘೋರ ಕೃತ್ಯ ; 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ...

CCTV ಯಲ್ಲಿ ಬಯಲಾಯ್ತು ಘೋರ ಕೃತ್ಯ ; 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಕಾಮುಕ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನ ಪಿಂಪಲ್‌ವಂಡಿಯಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ. ಮನೆಯಲ್ಲಿ ಒಬ್ಬಳೇ ಇದ್ದ 9 ವರ್ಷದ ಬಾಲಕಿಯ ಮೇಲೆ 25 ವರ್ಷದ ನೆರೆಮನೆಯ ಯುವಕ ಅತ್ಯಾಚಾರವೆಸಗಿ ಕತ್ತು ಹಿಸುಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಆಘಾತಕಾರಿ ಘಟನೆ ಇಡೀ ಪ್ರದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಮತ್ತು ಪೋಷಕರು ಪುಣೆ-ನಾಸಿಕ್ ಹೆದ್ದಾರಿಯನ್ನು ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಕೂಲಿ ಕಾರ್ಮಿಕರ ಕುಟುಂಬಕ್ಕೆ ಸೇರಿದ ನಾಲ್ಕನೇ ತರಗತಿಯ ಬಾಲಕಿ, ಅನಾರೋಗ್ಯದ ಕಾರಣದಿಂದ ಮಂಗಳವಾರ ಶಾಲೆಗೆ ರಜೆ ಹಾಕಿ ಮನೆಯಲ್ಲೇ ಉಳಿದುಕೊಂಡಿದ್ದಳು. ಮಧ್ಯಾಹ್ನದ ವೇಳೆ ಆಕೆಯ ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ಸಮಯವನ್ನು ಹೊಂಚುಹಾಕಿ ಕಾದು ಕುಳಿತಿದ್ದ ನೆರೆಮನೆಯ ಸಾಹಿಲ್ ಖೈರೆ ಎಂಬ 25 ವರ್ಷದ ಯುವಕ, ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಹಾಕಿದ್ದಾನೆ.

ಸಂಜೆ ಪೋಷಕರು ಮನೆಗೆ ಬಂದಾಗ ಬಾಲಕಿ ಕಾಣಿಸದೆ ಕಂಗಾಲಾಗಿದ್ದಾರೆ. ಸುತ್ತಮುತ್ತ ಹುಡುಕಾಟ ನಡೆಸಿ ಕೊನೆಗೆ ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ್ದಾರೆ. ಬಾಲಕಿಗಾಗಿ ಪೊಲೀಸರು ಮತ್ತು ಗ್ರಾಮಸ್ಥರು ಹುಡುಕಾಟ ನಡೆಸುತ್ತಿದ್ದಾಗ, ಆರೋಪಿ ಏನೂ ತಿಳಿಯದವನಂತೆ ತಾನೂ ಹುಡುಕಾಟದಲ್ಲಿ ಭಾಗವಹಿಸಿ ನಾಟಕವಾಡಿದ್ದ. ಆದರೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರಿಗೆ ಸೈಕಲ್‌ನಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬನ ಚಲನವಲನ ಕಂಡುಬಂದಿದೆ. ವಿಚಾರಣೆ ನಡೆಸಿದಾಗ ಅದು ತಾನೇ ಎಂದು ಒಪ್ಪಿಕೊಂಡ ಸಾಹಿಲ್, ಕೊನೆಗೆ ಕೃತ್ಯವೆಸಗಿರುವುದನ್ನು ಬಾಯ್ಬಿಟ್ಟಿದ್ದಾನೆ. ಆತ ನೀಡಿದ ಮಾಹಿತಿಯ ಆಧಾರದ ಮೇಲೆ ಹಳ್ಳದ ಸಮೀಪದ ಮರದ ಕೆಳಗೆ ಮುಚ್ಚಿಟ್ಟಿದ್ದ ಬಾಲಕಿಯ ಶವವನ್ನು ಪೊಲೀಸರು ಪತ್ತೆಹಚ್ಚಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪಿಂಪಲ್‌ವಂಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಕ್ರೋಶದ ಕಟ್ಟೆಯೊಡೆದಿದೆ. ಸ್ಥಳಕ್ಕೆ ಆಗಮಿಸಿದ ಪುಣೆ ಗ್ರಾಮಾಂತರ ಎಸ್ಪಿ ಸಂದೀಪ್ ಸಿಂಗ್ ಗಿಲ್ ಅವರಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಆರೋಪಿಯನ್ನು ಕೂಡಲೇ ನೇಣಿಗೇರಿಸಬೇಕು ಮತ್ತು ಪ್ರಕರಣವನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕೆಂದು ಪಟ್ಟು ಹಿಡಿದರು. 15 ದಿನಗಳೊಳಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ. ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಚರ್ಚಿಸಿ ಪ್ರಕರಣವನ್ನು ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗೆ ಒಪ್ಪಿಸಿ ಶೀಘ್ರ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular