HomeKarnatakaನ್ಯಾಯಬೆಲೆ ಅಂಗಡಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ನ್ಯಾಯಬೆಲೆ ಅಂಗಡಿಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ಬೆಂಗಳೂರು: 20 ಸಾವಿರ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲು ಹಾಗೂ ಆಹಾರ ಧಾನ್ಯಗಳ ಸಾಗಣೆ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಕ್ರಮಕೈಗೊಳ್ಳಲಾಗಿದೆ. ಈ ವ್ಯವಸ್ಥೆಯ ಮೇಲ್ವಿಚಾರಣೆಗೆ ‘ಕಮಾಂಡ್ ಕಂಟ್ರೋಲ್ ಸೆಂಟರ್’ ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ಟೆಂಡರ್ ಕರೆಯಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಕಾಳಸಂತೆಯಲ್ಲಿ ಆಹಾರ ಧಾನ್ಯಗಳ ಮಾರಾಟ ಪತ್ತೆ ಹಚ್ಚಿ ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

ಸದ್ಯ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿಟಿವಿ ವೇಬ್ರಿಡ್ಜ್ ಇಲ್ಲ. ಜಿಲ್ಲಾ ಸಗಟು ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಕೆ ಜಿಪಿಎಸ್ ಆಧರಿತ ವಾಹನ ಟ್ರ್ಯಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಕೇಂದ್ರಗಳನ್ನು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular