HomeKarnatakaರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಕೇಂದ್ರ ಸಚಿವ ಅಮಿತ್ ಶಾಗೆ ಮನವಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಕೇಂದ್ರ ಸಚಿವ ಅಮಿತ್ ಶಾಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ರಮೇಶ್ ಜಾರಕಿಹೊಳಿ ಪಟ್ಟುಹಿಡಿದಿದ್ದಾರೆ.

ಆಪ್ತರ ಜೊತೆಗೆ ಅವರು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾಗಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮನವಿ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಡಿ ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಬಗ್ಗೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವ ರಮೇಶ್ ಜಾರಕಿಹೊಳಿ ಇಂದು ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular