
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ದಿನಾಂಕ: 14.04.2024ರ ಭಾನುವಾರದಂದು ಡಾ| ಬಿ.ಆರ್. ಅಂಬೇಡ್ಕರ್ರವರ ಜಯಂತಿಯನ್ನು ಪ್ರಸ್ತುತ ಜಾರಿಯಲ್ಲಿರುವ ಲೋಕಸಭಾ ಚುನಾವಣೆ – 2024 ರ ಮಾದರಿ ನೀತಿ ಸಂಹಿತೆಯನ್ವಯ, ಪ್ರತಿ ವರ್ಷದಂತೆ ನಿಯಮಾನುಸಾರ ಆಚರಿಸಲು ಸೂಕ್ತ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ ಈ ಮೂಲಕ ಮತ್ತೊಮ್ಮೆ ತಿಳಿಸಿದೆ.



