HomeEntertainment'ರಾಜಾಹುಲಿ' ಸಿನಿಮಾಗೆ 10 ವರ್ಷದ ಸಂಭ್ರಮ

‘ರಾಜಾಹುಲಿ’ ಸಿನಿಮಾಗೆ 10 ವರ್ಷದ ಸಂಭ್ರಮ

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ರಾಜಾಹುಲಿ’ ಸಿನಿಮಾ 2013 ನವೆಂಬರ್ 1ರಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಬಿಡುಗಡೆಯಾಗಿ ಇಂದಿಗೆ ಹತ್ತು ವರ್ಷಗಳಾಗಿದ್ದು, ಈ ಸಂತಸವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಗುರು ದೇಶಪಾಂಡೆ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಮೇಘನಾ ರಾಜ್, ವಸಿಷ್ಠ, ಚಿಕ್ಕಣ್ಣ, ಚರಣ್ ರಾಜ್, ಮಿತ್ರ, ಶಶಿಕಲಾ, ಸುಧಾ ಬೆಳವಾಡಿ, ಸೌಜನ್ಯ, ಅರುಣಾ ಬಾಲ್ರಾಜ್, ಅಶ್ವಿನಿ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ಮಿ ಶ್ರೀ ಕಂಬೈನ್ಡ್ ಬ್ಯಾನರ್ ನಡಿ ಕೆ. ಮಂಜು ನಿರ್ಮಾಣ ಮಾಡಿದ್ದಾರೆ. ಕೆ ಎಂ ಪ್ರಕಾಶ್ ಅವರ ಸಂಕಲನ ಹಾಗೂ ನಾದಬ್ರಹ್ಮ ಹಂಸಲೇಖ ಸಂಗೀತ ಸಂಯೋಜನೆ ನೀಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular