HomeKarnatakaಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಸೂಚನೆ; ಪ್ಲಾಸ್ಟರ್‌ ಆಫ್‌ ಪ್ಯಾರೀಸ್ ಮೂರ್ತಿ ಮಾರಾಟ ಮಾಡಿದರೆ...

ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಸೂಚನೆ; ಪ್ಲಾಸ್ಟರ್‌ ಆಫ್‌ ಪ್ಯಾರೀಸ್ ಮೂರ್ತಿ ಮಾರಾಟ ಮಾಡಿದರೆ ಭಾರಿ ದಂಡ…!

ಕಡಲ ನಗರಿಯಲ್ಲಿ‌ ಕಳೆಗಟ್ಟಿದ ಗಣೇಶೋತ್ಸವ.. 2 ವರ್ಷದ ಬಳಿಕ ಅದ್ಧೂರಿ ಆಚರಣೆಗೆ ಸಿದ್ಧತೆ, karwar-ganesh-chaturthi-preparation

ದಾವಣಗೆರೆ: ಸೆಪ್ಟಂಬರ್ 18 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಮಹಾನಗರ ಪಾಲಿಕೆಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು, ಗಣೇಶ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮೂರ್ತಿ ತಯಾರಿಸಿ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು ಖರೀದಿಸದಂತೆ ತಿಳಿಸಲಾಗಿದೆ.

ಗಣೇಶ ಮೂರ್ತಿಗಳನ್ನು ಅರಿಶಿಣ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿ, ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾರಾಟ ಮಾಡಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ಗಣೇಶ ಮೂರ್ತಿ ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಂಡು, ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಹಾಗೂ ರೂ. 10,000 ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular