HomeLatest Newsಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಗೆಲುವಿಗೆ ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ

ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಗೆಲುವಿಗೆ ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ

ಅಹಮದಾಬಾದ್: ಏಕದಿನ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 192 ರನ್ ಗೆಲುವಿನ ಗುರಿ ಬೆನ್ನುತ್ತಿದ ಭಾರತ ಭರ್ಜರಿ ಜಯಗಳಿಸಿದೆ.

ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, ಟೀಂ ಇಂಡಿಯಾ ಬೌಲರ್ ಗಳ ಸಂಘಟಿತ ಪ್ರಯತ್ನದಿಂದ ಭಾರತ ತಂಡ 7 ವಿಕೆಟ್ ಗಳ ಜಯ ಗಳಿಸಿದೆ. ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶ್ವಕಪ್ ನಲ್ಲಿ 8ನೇ ಬಾರಿಗೆ ಪಾಕಿಸ್ತಾನ ತಂಡವನ್ನು ಭಾರತ ಮಣಿಸಿದ್ದು, ಭಾರತದ ಗೆಲುವಿಗೆ ದೇಶಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ಪಂದ್ಯ ನಡೆದ ಗುಜರಾತ್ ನ ಅಹ್ಮದಾಬಾದ್ ನರೇಂದ ಮೋದಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲುಮಟ್ಟಿದೆ. ಅದೇ ರೀತಿ ದೇಶದ ವಿವಿಧೆಡೆ ಅಭಿಮಾನಿಗಳು ಭಾರತದ ಗೆಲುವಿಗೆ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭಾರತದ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿ 42.5 ಓವರ್ ಗಳಲ್ಲಿ 191 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ಪರವಾಗಿ ಬಾಬರ್ ಆಜಂ 50, ಮಹಮ್ಮದ್ ರಿಜ್ವಾನ್ 49, ಇಮಾಮ್ ಉಲ್ ಹಕ್ 36 ರನ್ ಗಳಿಸಿದರು. ಭಾರತದ ಪರ ಬೂಮ್ರಾ, ಮಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀದ್ರ ಜಡೇಜ ತಲಾ 2 ವಿಕೆಟ್ ಪಡೆದರು.

ಗೆಲುವಿನ ಗುರಿ ಬೆನ್ನತ್ತಿದ ಭಾರತ 30.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ರೋಹಿತ್ ಶರ್ಮಾ 86, ಶುಭಮನ್ ಗಿಲ್ 16, ವಿರಾಟ್ ಕೊಹ್ಲಿ 16, ಶ್ರೇಯಸ್ ಅಯ್ಯರ್ ಅಜೇಯ 53, ಕೆ.ಎಲ್. ರಾಹುಲ್ ಅಜೇಯ 19 ರನ್ ಗಳಿಸಿದರು. ಪಾಕ್ ಪರ ಶಾಹಿನ್ ಅಫ್ರಿದಿ 2, ಹಸನ್ ಅಲಿ 1 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular