ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 07/09/2026 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 07/09/2026 ಸೋಮವಾರ ಬೆಳಗ್ಗೆ 9.30 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 07/09/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಸುರಕ್ಷತಾ ಕಿಟ್: ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 10 ಕೊನೆಯ ದಿನ
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಫಲಾನುಭವಿಯಾಗಿ ನೋಂದಾಯಿತರಾಗಿರುವ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯಿಂದ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈವರೆಗೆ ಸುರಕ್ಷತಾ ಕಿಟ್ ಪಡೆಯದಿರುವ ಮೇಷನ್, ಎಲೆಕ್ಟ್ರೀಷಿಯನ್, ವೆಲ್ಡರ್, ಕಾರ್ಪೆಂಟರ್, ಪೇಂಟಿಂಗ್ ಹಾಗೂ ಪ್ಲಂಬಿಂಗ್ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಫಲಾನುಭವಿಗಳಿಗೆ ಈ ಕಿಟ್‌ಗಳನ್ನು ನೀಡಲಾಗುತ್ತಿದೆ. ಅರ್ಹ ಕಾರ್ಮಿಕರು ತಾಲ್ಲೂಕಿನ ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ.
ಸಲ್ಲಿಸಬೇಕಾದ ದಾಖಲೆಗಳು:
ಚಾಲ್ತಿಯಲ್ಲಿರುವ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ
ಫಲಾನುಭವಿಯ ಆಧಾರ್ ಕಾರ್ಡ್ಈಗಾಗಲೇ ಸುರಕ್ಷತಾ ಕಿಟ್ ಪಡೆದಿರುವುದಿಲ್ಲವೆಂಬ ಬಗ್ಗೆ ಸ್ವಯಂ ದೃಢೀಕರಣ ಪತ್ರ
ದಾಖಲೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

