HomeKarnatakaBIG NEWS: ಸಿಮೆಂಟ್ ಲಾರಿ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ದುರ್ಮರಣ

BIG NEWS: ಸಿಮೆಂಟ್ ಲಾರಿ ಭೀಕರ ಅಪಘಾತ; ಚಾಲಕ ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಸಿಮೆಂಟ್ ತುಂಬಿದ್ದ ಲಾರಿ ಅಪಘಾತಕ್ಕೀಡಾಗಿ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಜಿಲ್ಲೆಯ ಹನೂರು ಪಟ್ಟಣದ ಹುಲುಸುಗಡ್ಡೆ ಬಳಿ ಈ ಘಟನೆ ನಡೆದಿದೆ. ಬಾಬು ಮೃತ ಚಾಲಕ. ಸಿಮೆಂಟ್ ಲಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ಲಾರಿಯ ಅಡಿಯಲ್ಲಿ ಚಾಲಕ ಸಿಲುಕಿ ಹೊರಬರಲಾಗದೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಲಾರಿ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಮಿಳುನಾಡಿನಿಂದ ಮೈಸೂರಿಗೆ ಲಾರಿಯಲ್ಲಿ ಸಿಮೆಂಟ್ ತುಂಬಿಕೊಂಡು ತರಲಾಗುತ್ತಿತ್ತು. ಈ ವೇಳೆ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular