HomeKarnatakaಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿತ: ಮೂವರು ಕಾರ್ಮಿಕರು ದಾರುಣ ಸಾವು

ಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿತ: ಮೂವರು ಕಾರ್ಮಿಕರು ದಾರುಣ ಸಾವು

ಆನೇಕಲ್: ಕಾರ್ಖಾನೆಯ ಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿದು ಬಿದ್ದು ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ತಮಿಳುನಾಡಿನ ಗಡಿಭಾಗವಾದ ಹೊಸೂರಿನ ಸಿಪ್​​ಕಾಟ್​​ ಬಳಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮರೇಶನ್(39), ಮೈಕೆಲ್(26) ಮತ್ತು ಶ್ರೀನಿವಾಸನ್(26) ಮೃತ ದುರ್ದೈವಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಾಜಿ ಗೇರ್ಸ್ ಹೆಸರಿನ ಖಾಸಗಿ ಕಾರ್ಖಾನೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾರ್ಮಿಕರು ಮೋಲ್ಡ್​​ಗೆ ಕಾಂಕ್ರೀಟ್​​ ಹಾಕುತ್ತಿದ್ದ ವೇಳೆ ಸೆಂಡ್ರಿಂಗ್​​ಗೆ ಹಾಕಿದ್ದ ಮರದ ದಿಮ್ಮಿಗಳು ಏಕಾಏಕಿ ಕುಸಿದಿವೆ. ಪರಿಣಾಮ ಕಟ್ಟಡದ ಅವಶೇಷಗಳಡಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ದಿನೇಶ್, ಎಸ್ಪಿ ಅನಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ವೇಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಅವಶೇಷಗಳ ಅಡಿ ಸಿಲುಕಿದ್ದ ಕಾರ್ಮಿಕರ ಮೃತದೇಹಗಳನ್ನು ಕ್ರೇನ್​​ ಬಳಸಿ ಹೊರಕ್ಕೆ ತೆಗೆಯಲಾಗಿದೆ.

ಕಟ್ಟಡದ ವಿನ್ಯಾಸ ರೂಪಿಸಿದ ಎಂಜಿನಿಯರ್ ಸೇರಿದಂತೆ ಕಾಮಗಾರಿಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೊಸೂರು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕುಮಾರ್, ನಿರ್ಮಾಣ ಕಾಮಗಾರಿಯಲ್ಲಿ ಒಟ್ಟು 17 ಮಂದಿ ತೊಡಗಿಸಿಕೊಂಡಿದ್ದರು. ಮುಖ್ಯ ಪ್ರವೇಶ ದ್ವಾರ ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಮೃತರು ಹೊಸೂರು, ತಿರುಪತ್ತೂರು ಮತ್ತು ತಿರುವಣ್ಣಾಮಲೈ ಮೂಲದವರು ಎಂದು ತಿಳಿದುಬಂದಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular