ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ, ರಾಜ್ಯ ಸರ್ಕಾರ: PDPS ನಡಿ ಹೆಚ್ಚುವರಿ ದರ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮಾವಿನ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ(ಪಿಡಿಪಿಎಸ್)ಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಕೆಜಿಗೆ ತಲಾ ಎರಡು ರೂಪಾಯಿಯಂತೆ 4 ರೂಪಾಯಿ ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯ ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿವೆ.

ರಾಜ್ಯದಲ್ಲಿ ಮಾವು ಬೆಲೆ ಕುಸಿತಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದು, ಮಾವು ಬೆಳೆಗಾರರ ಸಮಸ್ಯೆ ಬಗ್ಗೆ ತಿಳಿಸಿದ್ದಾರೆ.

ಈ ವೇಳೆ 2025- 26 ನೇ ಸಾಲಿಗೆ ಮಾವು ಬೆಳೆಗೆ ಪಿಡಿಪಿಎಸ್ ಯೋಜನೆ ಅನುಷ್ಠಾನಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವರು 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಸಮ್ಮತಿಸಿ ಪ್ರತಿ ಕೆಜಿಗೆ ಎರಡು ರೂಪಾಯಿ ವಂತಿಗೆ ನೀಡುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read